top of page

Lok Sabha Election: STATE WISE DETAILS

Mar 16, 2024

1 min read

2

92




ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಒಟ್ಟು 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ


ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಆಗಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.




ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತಮಿಳು ನಾಡು, ಘತ್ತೀಸ್‌ಘಡ್‌, ರಾಜಸ್ತಾನ, ಮಧ್ಯಪ್ರದೇಶ, ಉತ್ತರಖಂಡ, ಉತ್ತರ ಪ್ರದೇಶ, ಜಮ್ಮು ಹಾಗೂ ಕಾಶ್ಮೀರ, ಬಿಹಾರ, ಪಶ್ಚಿಮ ಬಂಗಾಳ ದಲ್ಲಿ ಮತದಾನ ನಡೆಯಲಿದೆ. *ಏಪ್ರಿಲ್ 26ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರ, ಕರ್ನಾಟಕ, ಮಣಿಪುರ, ಬಿಹಾರ, ರಾಜಸ್ತಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.

ಮೇ 20 ರಂದು ಐದನೇ ಹಂತದಲ್ಲಿ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರ, ಒಡಿಶಾ, ಜಾರ್ಖಾಂಡ್, ಮಹಾರಾಷ್ಟ್ರ, ಜಮ್ಮು ಹಾಗೂ ಕಾಶ್ಮೀರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.

ಮೇ 25ರಂದು ಆರನೇ ಹಂತದಲ್ಲಿ 56 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರ, ಹರಿಯಾಣ, ದೆಹಲಿ, ಜಾರ್ಖಾಂಡ್, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ. *ಜೂನ್ 1ರಂದು ಏಳನೇ ಹಂತದಲ್ಲಿ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರ, ಹಿಮಾಚಲ ಪ್ರದೇಶ, ಜಾರ್ಖಾಂಡ್, ಒಡಿಶಾ, ಪಶ್ಚಿಮ ಬಂಗಾಳ, ಪಂಜಾಬ್‌ ಘತ್ತೀಸ್‌ಘಡ್‌, ಉತ್ತರ ಪ್ರದೇಶದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ ಎಂದು ವರದಿಯಾಗಿದೆ












Mar 16, 2024

1 min read

2

92

bottom of page